ಹುಬ್ಬಳ್ಳಿ : ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯ ಬಜೆಟ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ನಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ.
ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದರು.
ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ. ಅದನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೆ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.