ಬೆಂಗಳೂರು : ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಇದು ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗುತ್ತಿದೆ. 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ ಎಂದು ಅವರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋಯತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಭಾಗವಹಿಸುತ್ತವೆ. ಅದರಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಈ ಬಾರಿಯೂ ಆಯ್ಕೆ ಆಗಿದೆ.