Publish Date: Sun, 20 Aug 2023 (09:46 IST)
Updated Date: Sun, 20 Aug 2023 (12:48 IST)
ಬೆಳಗಾವಿ : ಈ ಬಾರಿ ಚಂದ್ರಯಾನ-3 ಯಶಸ್ವಿಯಾಗಲಿದೆ ಎಂದು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚಂದ್ರಯಾನ 3 ಯಶಸ್ವಿಯಾಗಲಿದೆ. ಆದ್ರೆ ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ.
ಭೂಕಂಪನ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ.