Select Your Language

Notifications

webdunia
webdunia
webdunia
webdunia

ಕೋವಿಡ್ ಪ್ರಕರಣ ಏರಿಕೆ!

ಕೋವಿಡ್ ಪ್ರಕರಣ  ಏರಿಕೆ!
ಬೆಂಗಳೂರು , ಶನಿವಾರ, 25 ಜೂನ್ 2022 (07:03 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಝ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
 
ಅಲ್ಲದೆ ರಾಜ್ಯದಲ್ಲಿ ಓರ್ವ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು 682 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಮೂಲಕ ಇದುವರೆಗೆ 39,18,452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 36,289 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದ್ದು, ಇದುವರೆಗೆ 6,68,37,154 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. 

5067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಓರ್ವ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಒಟ್ಟು 40072 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಶೇ.2.36 ಇದ್ದು, ಮೃತರ ಪ್ರಮಾಣ ಶೇ.0.11 ಇದೆ. ಒಟ್ಟು 36,289 ಸ್ಯಾಂಪಲ್ (ಆರ್ಟಿಪಿಸಿಆರ್ 29,462 + 6,827 (ರ್ಯಾಪಿಡ್ + ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯ ಪುನರ್ ವಿಂಗಡಣೆಯ ಕರಡು ಪಟ್ಟಿಯನ್ನು ಪ್ರಕಟ