Publish Date: Sun, 12 Jun 2022 (13:28 IST)
Updated Date: Sun, 12 Jun 2022 (12:29 IST)
ಬಳ್ಳಾರಿ : ಮತ್ತೆ ಕೊರೊನಾ ಕಾಟ ಕೊಡಲಿದೆ. ಕೊರೊನಾ ಹೋಗುವಾಗ ಹೆಚ್ಚು ಕಾಟ ಕೊಡಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಗಣಿನಾಡು ಬಳ್ಳಾರಿಗೆ ಇಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಆಗಮಿಸಿದ್ದರು. ಬಳ್ಳಾರಿಯ ಕಾಂಗ್ರೆಸ್ ಮುಖಂಡ ಸುನೀಲ್ ರಾವೂರ್ ಅವರ ಮನೆಗೆ ಆಗಮಿಸಿ, ಭಕ್ತಾದಿಗಳಿಗೆ ಆಶೀರ್ವಾದ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ಕೊರೊನಾ ಕುರಿತು ಭವಿಷ್ಯ ನುಡಿದಿದ್ದಾರೆ. ಕೊರೊನಾ ಒಂದೂವರೆ ವರ್ಷದಲ್ಲಿ ಹೋಗುತ್ತೆ. ಆದರೆ ಹೋಗುವಾಗ ತುಂಬಾ ಕಷ್ಟ ಕೊಟ್ಟು ಹೋಗುತ್ತೆ. ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ. ಅಷ್ಟೊಂದು ನೋವನ್ನು ಕೊಡುತ್ತೆ ಎಂದು ಶ್ರೀಗಳು ತಿಳಿಸಿದ್ದಾರೆ.
ಕೋವಿಡ್ ವಿಶೇಷವೇನೆಂದರೆ, ಮನುಷ್ಯ ಕಷ್ಟ ಬಂದಾಗ ದೇವರು, ಧರ್ಮ ಅಂತಾನೆ ಮತ್ತು ಪ್ರಾರ್ಥನೆ ಮಾಡ್ತಾನೆ. ಕೋವಿಡ್ ನೇರವಾಗಿ ಬಂದು ದೇವರನ್ನೇ ಹಿಡಿದುಕೊಂಡು, ದೇವಸ್ಥಾನಗಳ ಬಾಗಿಲು ಹಾಕಿಸಿತು. ಆಮೇಲೆ ಜನರ ಮೇಲೆ ಬಂತು, ನೀರಿನ ಮೇಲೆ, ಭೂಮಿ ಮೇಲೆ ಬಂತು ಎಂದು ಹೇಳಿದ್ದಾರೆ.