Select Your Language

Notifications

webdunia
webdunia
webdunia
webdunia

ಕೆಎಸ್ಆರ್ಟಿಸಿ : ಬಸ್ ಸಂಚಾರದಲ್ಲಿ ವ್ಯತ್ಯಯ

ಕೆಎಸ್ಆರ್ಟಿಸಿ : ಬಸ್ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು , ಭಾನುವಾರ, 22 ಜನವರಿ 2023 (10:53 IST)
ಬೆಂಗಳೂರು :  ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ. 6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ.

ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು,

ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.

ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ