ಲಕ್ಷ್ಮಿ ಹೆಬ್ಬಾಳ್ಕರ್​​ ಭಾವಚಿತ್ರ ಇರುವ ಕುಕ್ಕರ್ ಬಾಕ್ಸ್​​​​ಗಳ ವಾಹನ ವಶಕ್ಕೆ

Webdunia
ಶನಿವಾರ, 31 ಮಾರ್ಚ್ 2018 (13:44 IST)
ಕಾಂಗ್ರೆಸ್​​​ನ ಲಕ್ಷ್ಮಿ ಹೆಬ್ಬಾಳ್ಕರ್​​ ಭಾವಚಿತ್ರ ಇರುವ ಕುಕ್ಕರ್​​​ ತುಂಬಿದ ಲಾರಿಯೊಂದನ್ನು ಇಂದು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ನಾಲ್ಕು ದಿನದ ನಂತರ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿ ಲಕ್ಷ್ಮಿ ಹೆಬ್ಬಾಳ್ಕರ್​​ ಭಾವಚಿತ್ರ ಇರುವ ಕುಕ್ಕರ್ ಬಾಕ್ಸ್​​​​ಗಳ ವಾಹನ ಡಿಸಿ ಬಂಗ್ಲೆ ಎದುರು ಪತ್ತೆಯಾಗಿತ್ತು.
ಈ ಕುರಿತು ಬಿಜೆಪಿಯ ಅನಿಲ್ ಬೆನಕೆ ಚುನಾವಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ನೀಡಿ 40 ನಿಮಿಷ ಕಳೆದರೂ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿರಲಿಲ್ಲ. 
 
ಆದ್ರಿಂದ ಲಾರಿ ಹೊರಟಿತ್ತು ಬಳಿಕ ಇಬ್ಬರು ಪೊಲೀಸ್ ಇನ್ಸ್​​​​​ಪೆಕ್ಟರ್‌ಗಳು ಆಗಮಿಸಿ ವಾಹನವನ್ನು ರಸ್ತೆಯಲ್ಲಿ ತಡೆದರು. ಆ ನಂತರ ಚುನಾವಣಾ ಅಧಿಕಾರಿಗಳು ಆಗಮಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಾಗೂ ಅನಿಲ್ ಬೆನಕೆ ನಡುವೆ ವಾಗ್ವಾದ ನಡೆಯಿತು. ಸಿಬ್ಬಂದಿ ತಪಾಸಣೆ ನಡೆಸಿದಾಗ ಕುಕ್ಕರ್‌ಗಳು ಕಂಡು ಬಂದಿದ್ದು, ಅಧಿಕಾರಿಗಳು ವಾಹನವನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments