Select Your Language

Notifications

webdunia
webdunia
webdunia
webdunia

ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
ಕಾರವಾರ , ಮಂಗಳವಾರ, 21 ಜೂನ್ 2022 (13:25 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಇಂದು ಧಾರಾಕಾರ ಮಳೆಯಾಗುತ್ತಿದೆ.

ಮಳೆಯಿಂದಾಗಿ ಕಾರವಾರ ನಗರ ಮತ್ತು ಸುತ್ತಮುತ್ತ ಹಲವು ರಸ್ತೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಾರವಾರ ನಗದ ಹಬ್ಬುವಾಡದಲ್ಲಿ ಹೈಚರ್ಚ್ ರಸ್ತೆ, ನಂದನಗದ್ದಾ, ರೈಲು ನಿಲ್ದಾಣ ರಸ್ತೆ ಸೇರಿದಂತೆ ಹಲವೆಡೆ ಚರಂಡಿಯಿಂದ ಮಳೆ ನೀರು ಉಕ್ಕಿ ಹರಿದಿದೆ. ರಸ್ತೆಯಲ್ಲಿ ಉಕ್ಕಿ ಹರಿದ ನೀರಿನಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ನಗರದ ರೈಲ್ವೆ ನಿಲ್ದಾಣರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. 

ಜಿಲ್ಲೆಯಲ್ಲಿ ಇದೇ ತಿಂಗಳು 25ರ ವರೆಗೆ ಯಲ್ಲೋ ಅಲರ್ಟ ಫೋಷಿಸಲಾಗಿದ್ದು, ನದಿ ದಡದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಿರುಕುಳ ನೀಡಲು ವಿಚಾರಣೆ ನಡೆಸುತ್ತಿದ್ದಾರೆ : ಡಿಕೆಶಿ