Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ

ಮೆಟ್ರೋ
ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸಲು ಪ್ರಯಾಣಿಕರಿಗೆ ಅವಕಾಶ ನೀಡುವ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.
 
ದೆಹಲಿ ಮೆಟ್ರೋ ಪ್ರಯಾಣಿಕರಿಗೆ ಎರಡು ಮದ್ಯದ ಸೀಲ್ಡ್ ಬಾಟಲಿಗಳನ್ನು ಸಾಗಿಸಲು ಅನುಮತಿ ನೀಡಿದ ನಂತರ ಬಿಎಂಆರ್ಸಿಎಲ್ ಕೂಡ ಮೆಟ್ರೋ ನಿಲ್ದಾಣದೊಳಗೆ ಪ್ರಯಾಣಿಕರಿಗೆ ಮದ್ಯವನ್ನು ಸಾಗಿಸಲು ಅವಕಾಶ ಕಲ್ಪಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ಮೆಟ್ರೋ ರೈಲಿನಲ್ಲಿ ಮದ್ಯವನ್ನು ಸಾಗಿಸಲು ಪ್ರಯಾಣಿಕರಿಗೆ ದೆಹಲಿ ಮೆಟ್ರೋ ಇತ್ತೀಚೆಗೆ ಅನುಮತಿ ನೀಡಿದೆ. ಆ ಕುರಿತು ಅಧ್ಯಯನ ಮಾಡಿದ ನಂತರ ಪ್ರಯಾಣಿಕರಿಗೆ ಮದ್ಯವನ್ನು ಸಾಗಿಸಲು ಅನುಮತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಮ್ ಪರ್ವೇಜ್ ‘ಟೈಮ್ಸ್ ಆಫ್ ಇಂಡಿಯಾ’ಗೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಳೆಯ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ