Select Your Language

Notifications

webdunia
webdunia
webdunia
webdunia

ಮದ್ಯ ಪ್ರಿಯರೇ… ಎಚ್ಚರ!

ಉತ್ತರ ಪ್ರದೇಶ
ಲಕ್ನೋ : ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಅಜಂಗಢ್ನ ಅಹ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹುಲ್ ನಗರದಲ್ಲಿ ನಡೆದಿದೆ.
 
ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 44 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರು-ಏಳು ಮಂದಿ ಡಯಾಲಿಸಿಸ್ನಲ್ಲಿದ್ದಾರೆ.

ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಜಂಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮೃತ್ ತ್ರಿಪಾಠಿ ತಿಳಿಸಿದ್ದಾರೆ.  ಇದೀಗ ಪೊಲೀಸರು ಅಂಗಡಿಯ ಇಬ್ಬರು ಮಾರಾಟಗಾರರನ್ನು ಬಂಧಿಸಿದ್ದಾರೆ ಮತ್ತು ಮಾಲೀಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಸದ್ಯ ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹರ್ಷ ಕುಟುಂಬಕ್ಕೆ 6 ಲಕ್ಷ ರೂ. ಕೊಡುತ್ತೇನೆ : ರೇಣುಕಾಚಾರ್ಯ