Publish Date: Mon, 27 Dec 2021 (06:31 IST)
Updated Date: Mon, 27 Dec 2021 (07:33 IST)
ಪರಿಷತ್ ಚುನಾವಣೆ ಫೈಟ್ ನಂತರ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ.
ಐದು ನಗರಸಭೆಗಳು ಸೇರಿದಂತೆ ಅವಧಿ ಪೂರ್ಣಗೊಂಡಿರುವ ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಇಂದು ಚುನಾವಣೆ ನಡೆಯಲಿದೆ.
ಚುನಾವಣೆ ನಡೆಯುತ್ತಿರುವ ಎಲ್ಲಾ ಜಿಲ್ಲೆಗಳಲ್ಲಿ ಆಯಾ ತಾಲೂಕು ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ನಿನ್ನೆಯೇ ಮತಗಟ್ಟೆಗಳಿಗೆ ಆಗಮಿಸಿದ್ದು, ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಐದು ನಗರ ಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳ ಒಟ್ಟು 1185 ವಾರ್ಡ್‌ಗಳಲ್ಲಿಂದು ವೋಟಿಂಗ್ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 5ರವರೆಗೂ ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ.