Webdunia - Bharat's app for daily news and videos

Install App

ಕೇರಳ ಬಳಿಕ ಬಂಗಾಳದಲ್ಲಿ ಲಾಕ್ಡೌನ್; ಕರ್ನಾಟಕದಲ್ಲಿ ಹೆಚ್ಚಿದ ಆತಂಕ!

Webdunia
ಶುಕ್ರವಾರ, 30 ಜುಲೈ 2021 (09:49 IST)
ಬೆಂಗಳೂರು(ಜು.30):  ಕೊರೋನಾ 2ನೇ ಅಲೆ ಕಡಿಮೆಯಾಗಿದೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳು ಅನ್ಲಾಕ್ ಆಗಿವೆ. ಇದರ ಪರಿಣಾಣ ಇದೀಗ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ.  ಕೇರಳದಲ್ಲಿ ಕೊರೋನಾ ಮೀತಿ ಮೀರುತ್ತಿದೆ. ಹೀಗಾಗಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.

•ಅನ್ಲಾಕ್, ನಿರ್ಲಕ್ಷ್ಯದಿಂದ ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ
•ಕೇರಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಲಾಕ್ಡೌನ್ ವಿಸ್ತರಣೆ
•ಕರ್ನಾಟಕ ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ
•ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಿದ ಆತಂಕ
 ಇದೀಗ ಪಶ್ಚಿಮ ಬಂಗಾಳದಲ್ಲಿ ಲಾಕ್ಡನ್ ವಿಸ್ತರಿಸಲಾಗಿದೆ. ಈ ಬೆಳವಣಿಗೆ ಕರ್ನಾಟಕದಲ್ಲಿನ ಆತಂಕ ಹೆಚ್ಚಿಸಿದೆ. ಪಶ್ಚಿಮ ಬಂಗಾಳದಲ್ಲಿ ಆಗಸ್ಟ್ 15ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಆದರೆ ಕೆಲ ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆ ವರೆಗೆ ಇರಲಿದೆ. ಇನ್ನು ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಬಂಗಾಳ
ಕೇರಳದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯ ಹೆಚ್ಚಳವಾಗಿದೆ. ಹೀಗಾಗಿ ಜುಲೈ 31 ಹಾಗೂ ಆಗಸ್ಟ್ 1 ರಂದು ಕೇರಳ ಸಂಪೂರ್ಣ ಲಾಕ್ಡೌನ್ ಆಗಲಿದೆ. ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕ ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದು ಆತಂಕ ಹೆಚ್ಚಿಸಿದೆ.
ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕರ್ನಾಟಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಇನ್ನು ಕರ್ನಾಟಕ ಸಂಪೂರ್ಣ ಅನ್ಲಾಕ್ ಆಗಿದೆ. ಹೀಗಾಗಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಸುತ್ತ ಮುತ್ತಲಿನ ಎಲ್ಲಾ ರಾಜ್ಯಗಳಲ್ಲಿ ಕೊರೋನಾ ಏರಿಕೆಯಿಂದ ಇದೀಗ ಕರ್ನಾಟಕದಲ್ಲೂ ಕಠಿಣ ನಿಯಮ ಜಾರಿಯಾದರೂ ಅಚ್ಚರಿಯಿಲ್ಲ.
ಕೇರಳದಲ್ಲಿ ಪ್ರತಿ ದಿನ 22,856 ಹೊಸ ಕೊರೋನಾ ಪ್ರಕರಣ ದಾಖಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 6,857 ಕೊರೋನಾ ಪ್ರಕರಣ, ಆಂಧ್ರ ಪ್ರದೇಶದಲ್ಲಿ 2,000 ಹಾಗೂ ಕರ್ನಾಟಕದಲ್ಲಿ ಹೊಸ ಕೊರೋನಾ ಪ್ರಕರಣ ಸಂಖ್ಯೆ ಪ್ರತಿ ದಿನ 1531 ದಾಖಲಾಗುತ್ತಿದೆ. ಗಡಿ ನಿರ್ಬಂಧವೂ ತೆರವುಗೊಳಿಸಾಗಿರುವ ಕಾರಣ ಕರ್ನಾಟಕದ ಆತಂಕ ಹೆಚ್ಚಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments