Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ!

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ!
ದಾವಣಗೆರೆ , ಸೋಮವಾರ, 29 ನವೆಂಬರ್ 2021 (17:46 IST)
ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ರೂಪಾಂತರಿ ವೈರಸ್ ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ.
ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಎಂದರು. ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ.
ಬೂಸ್ಟರ್ ಡೋಸ್ ಗೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರ ಸರ್ಕಾರದಿಂದ ನಿರ್ದೇಶನ ಬರಬೇಕಿದೆ. ನಮ್ಮ ಕಾಳಜಿ ಆರೋಗ್ಯ ಕಾರ್ಯಕರ್ತರದ್ದು. ಈಗಾಗಲೇ ಅವರು ಎರಡು ಡೋಸ್ ಪಡೆದು 6 ತಿಂಗಳ ಮೇಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನುಗುಣವಾಗಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಡೆಲ್ಟಾಗಿಂತ ಭಿನ್ನ ವೈರಸ್ ಪತ್ತೆ !