Daily Horoscope
✕

ಡಿಎಂಕೆ ಧುರೀಣ ಎಂ ಕರುಣಾನಿಧಿ ತೀವ್ರ ಅಸ್ವಸ್ಥ

Webdunia
ಶುಕ್ರವಾರ, 27 ಜುಲೈ 2018 (10:22 IST)
ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ನೋಡಲು ಗೋಪಾಲಪುರಂ ಬಳಿಯ ನಿವಾಸಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ.

ಇತ್ತೀಚೆಗಿನ ದಿನಗಳಲ್ಲಿ ಸಾರ್ವಜನಿಕ ಜೀವನದಿಂದ ದೂರವಾಗಿರುವ 94 ವರ್ಷದ ಕರುಣಾನಿಧಿ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ನಿಗಾ ವಹಿಸಿದ್ದಾರೆ. ಇನ್ನು, ಅವರ ಆರೋಗ್ಯದ ಬಗ್ಗೆ ಹರಿದಾಡುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪುತ್ರ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.

ಇನ್ನು, ತಮಿಳುನಾಡು ಡಿಸಿಎಂ ಒ ಪನೀರ್ ಸೆಲ್ವಂ ಸೇರಿದಂತೆ ಸಚಿವರ ದಂಡೇ ಹರಿದುಬಂದಿದೆ.  ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಯಾಗಿರುವ ಕಮಲ್ ಹಾಸನ್ ಕೂಡಾ ಕರುಣಾನಿಧಿ ನಿವಾಸಕ್ಕೆ ಆಗಮಿಸಿದ್ದಾರೆ.

ಜ್ವರ, ಮೂತ್ರದ ಸೋಂಕು ಸಮಸ್ಯೆಯಿಂದ ಕರುಣಾನಿಧಿ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸದೇ ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬ ವರ್ಗ ತೀರ್ಮಾನಿಸಿದೆ. ಹೀಗಾಗಿ ಕಾವೇರಿ ಆಸ್ಪತ್ರೆಯ ವೈದ್ಯರು ಕರುಣಾನಿಧಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments