Publish Date: Sat, 27 Nov 2021 (11:02 IST)
Updated Date: Sat, 27 Nov 2021 (11:04 IST)
ಬೆಂಗಳೂರು : ಕೆಲವು ದಿನಗಳಿಂದ ಆಫ್ರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ.
ಕೊರೊನಾ ಡೆಲ್ಟಾ ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹರಡಿತ್ತು. ಈಗ ಹೊಸದಾಗಿ ಒಮಿಕ್ರೋನ್ ಕಾಣಿಸಿಕೊಂಡಿದೆ. ಸಮುದಾಯಕ್ಕೆ ವೇಗವಾಗಿ ಹರಡುತ್ತದೆ ಎನ್ನುವ ಮಾಹಿತಿ ಇದೆ ಎಂದು ತಿಳಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ.
ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ ಮಾಹಿತಿ ನೀಡಿದೆ. ಹೊಸ ವೈರಸ್ ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ನಿನ್ನೆ ಇದೇ ವಿಚಾರವಾಗಿ ಸಭೆ ಮಾಡಿ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬಂದರೆ ಏರ್ಪೋರ್ಟ್ನಲ್ಲೆ ಟೆಸ್ಟ್ ಮಾಡಲಾಗುತ್ತದೆ ಅಂತ ತಿಳಿಸಿದ್ದಾರೆ.