ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇದನ್ನು ಜಾರಿಗೊಳಿಸಲು ಮಾರ್ಷಲ್ ಮತ್ತು ಪೊಲೀಸರು ಸಹಾಯ ಪಡೆಯುವುದು.
ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ಗಳು, ಕಚೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ.
ಆಯಾಯ ಸಂಸ್ಥೆಯ ಆಡಳಿತ ಸಂಸ್ಥೆ ಮತ್ತು ಮಾಲೀಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಬಸ್, ರೈಲು, ಸ್ವಂತ ವಾಹನಗಳಲ್ಲಿ ಓಡಾಡಬೇಕಾದ್ರೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಐಎಲ್ಐ, ಸಾರಿ ಮತ್ತು ಇತರ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು.
ರಿಸಲ್ಟ್ ಬರುವವರೆಗೂ ಮನೆಯಲ್ಲಿ ಪ್ರತ್ಯೇಕವಾಗಿ ಇರಬೇಕು. ಅರ್ಹ ಫಲಾನುಭವಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.