Select Your Language

Notifications

webdunia
webdunia
webdunia
webdunia

ಯಾವ ವಯಸ್ಸಿನವರಿಗೆ ಮಾಸ್ಕ್ ಕಡ್ಡಾಯವಲ್ಲ?: ಕೇಂದ್ರ

ಯಾವ ವಯಸ್ಸಿನವರಿಗೆ ಮಾಸ್ಕ್ ಕಡ್ಡಾಯವಲ್ಲ?: ಕೇಂದ್ರ
ನವದೆಹಲಿ , ಶುಕ್ರವಾರ, 21 ಜನವರಿ 2022 (07:21 IST)
ನವದೆಹಲಿ : ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ, 11 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
 
ಕೊರೊನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಟಿರಾಯ್ಡ್ ಅನ್ನು ಬಳಸುವುದಾದರೂ ಅದು 10 ರಿಂದ 14 ದಿನಕ್ಕೆ ಸೀಮಿತವಾಗಿರಬೇಕು.

ಮಕ್ಕಳು ಮತ್ತು ಅಪ್ರಾಪ್ತರಿಗೆ ಸಂಬಂಧಿಸಿದಂತೆ ಕೋವಿಡ್ ನಿರ್ವಹಣೆ ಕುರಿತ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಐದು ವರ್ಷ ಮತ್ತು ಅದಕ್ಕೂ ಕೆಳಗಿನ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಪಡಿಸಿಲ್ಲ. 6-11 ವರ್ಷದ ಮಕ್ಕಳು ಮಾಸ್ಕ್ ಬಳಸುವ ಅವರ ಸಾಮಥ್ರ್ಯಕ್ಕೆ ಅನುಗುಣವಾಗಿ, 12 ವರ್ಷ ಮೀರಿದವರು ಕಡ್ಡಾಯವಾಗಿ ವಯಸ್ಕರು ಧರಿಸುವಂತೆಯೇ ಮಾಸ್ಕ್ ಧರಿಸಬೇಕು ಎಂದು ಹೇಳಿದೆ.

ಸೋಂಕಿನ ತೀವ್ರತೆಯನ್ನು ಸೋಂಕಿನ ಲಕ್ಷಣ ಇಲ್ಲದಿರುವುದು, ಸಾಧಾರಣ, ಗಮನಿಸಬೇಕಾದುದು ಮತ್ತು ತೀವ್ರವಾದುದು ಎಂದು ವರ್ಗೀಕರಿಸಲಾಗಿದೆ. ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗ. ಇವುಗಳ ನಿರ್ವಹಣೆಯಲ್ಲಿ ಆ್ಯಂಟಿಮೈಕ್ರೊಬಯುಲ್ಗಳ ಪಾತ್ರ ಇಲ್ಲ ಎಂದು ಹೇಳಿದೆ.

ಓಮೈಕ್ರಾನ್ ರೂಪಾಂತರ ತಳಿಯ ಕೋವಿಡ್ ಸೋಂಕು ಪ್ರಕರಣ ಏರಿಕೆಯ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಗುರುವಾರ ಕೊರೊನಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿತು. ಇತರೆ ದೇಶಗಳಿಗೆ ಸಂಬಂಧಿಸಿದ ಅಂಕಿ ಅಂಶಗಳ ಪ್ರಕಾರ, ಓಮೈಕ್ರಾನ್ ಸೋಂಕಿನ ಪರಿಣಾಮ, ತೀವ್ರತೆ ಕಡಿಮೆ ಆಗಿದೆ. ಪ್ರಸ್ತುತ ಏರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿ ಪತ್ನಿಯನ್ನೇ ವೈದ್ಯರಿಗೇ ಸುಪಾರಿ ಕೊಟ್ಟ ಪತಿ!