Select Your Language

Notifications

webdunia
webdunia
webdunia
webdunia

ಚಿತ್ರಮಂದಿರ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ : ಅಶೋಕ್

ಚಿತ್ರಮಂದಿರ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ : ಅಶೋಕ್
ಬೆಂಗಳೂರು , ಮಂಗಳವಾರ, 27 ಡಿಸೆಂಬರ್ 2022 (11:40 IST)
ಕೊರೊನಾ ಭೀತಿ ಮತ್ತೆ ಶುರುವಾಗಿರುವ ಹಿನ್ನೆಲೆಯಲ್ಲಿ, ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಒಂದಷ್ಟು ಕಠಿಣ ಕ್ರಮಗಳನ್ನು ತಗೆದುಕೊಂಡಿದ್ದು, ಚಿತ್ರಮಂದಿರಗಳಿಗೆ ಹೋಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ‘ಚಿತ್ರಮಂದಿರಕ್ಕೆ ಹೋಗುವವರು ಮಾಸ್ಕ್ ಧರಿಸಲೇಬೇಕು. ಮಾಸ್ಕ್ ಹಾಕಿಕೊಳ್ಳದೇ ಚಿತ್ರಮಂದಿರಕ್ಕೆ ಬಂದರೆ, ಅವರಿಗೆ ಪ್ರವೇಶ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.

ದೇಶಾದ್ಯಂತ ಮತ್ತೆ ಕೊರೊನಾ ಹಾವಳಿ ಶುರುವಾಗಿದೆ. ಈಗಿನಿಂದಲೇ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ರಾಜ್ಯ ಸರಕಾರ ತಗೆದುಕೊಳ್ಳಲಾಗುತ್ತಿದೆ. ತಜ್ಞರ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.

ಕೇವಲ ಚಿತ್ರಮಂದಿರಗಳಿಗೆ ಮಾತ್ರವಲ್ಲ, ಹೊಸ ವರ್ಷಕ್ಕೂ ಒಂದು ಮಾರ್ಗಸೂಚಿ ಬಿಡುಗಡೆ ಆಗಿದ್ದು, ಸಭೆ ಸಮಾರಂಭದಲ್ಲೂ ಮಾಸ್ಕ್ ಹಾಕುವಂತೆ ಸೂಚಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿಗೆ ಕೊರೊನಾ ಬಗ್ಗೆ ಜಿನ್ಪಿಂಗ್ ಮಾತು?