Select Your Language

Notifications

webdunia
webdunia
webdunia
webdunia

ಮೆಡಿಕಲ್ ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ : ಸುಪ್ರೀಂ

ಮೆಡಿಕಲ್ ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ : ಸುಪ್ರೀಂ
ನವದೆಹಲಿ , ಭಾನುವಾರ, 13 ನವೆಂಬರ್ 2022 (10:35 IST)
ನವದೆಹಲಿ : ಶಿಕ್ಷಣ ಲಾಭಗಳಿಸುವ ವ್ಯವಹಾರವಲ್ಲ. ಬೋಧನಾ ಶುಲ್ಕ ಯಾವಾಗಲೂ ಕೈಗೆಟುಕುವ ದರದಲ್ಲಿ ಇರಬೇಕು ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಆಂಧ್ರಪ್ರದೇಶ ಹೈಕೋರ್ಟ್ನ ಆದೇಶವನ್ನು ಎತ್ತಿ ಹಿಡಿದಿದೆ.

ಕೋರ್ಟ್ 2017 ರಲ್ಲಿ ಅನುದಾನ ರಹಿತ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್ನ  ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗಳಿಗೆ ಏರಿಕೆ ಮಾಡಿದ ಆಂಧ್ರ ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

2011ರಲ್ಲಿ ನಿಗದಿಪಡಿಸಿದ್ದ ಶುಲ್ಕಕ್ಕಿಂತ ಏಳು ಪಟ್ಟು ಹೆಚ್ಚಿರುವ ವಾರ್ಷಿಕ ಶುಲ್ಕವನ್ನು 24 ಲಕ್ಷ ರೂ.ಗಳಿಗೆ ಹೆಚ್ಚಿಸಿರುವ 2017ರ ರಾಜ್ಯ ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಷಾ ಹಾಗೂ ಎಂ.ಎಂ.ರುದ್ರೇಶ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ನುಗ್ಗಿ ಗಂಡನ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ !