ಮೆಟ್ರೋ ಎಂಜಿನಿಯರ್ ಸಸ್ಪೆಂಡ್, ಕಂಟ್ರಾಕ್ಟರ್ ಮೇಲೆ ಕ್ರಿಮಿನಲ್ ಕೇಸ್ : ಸಿಎಂ

Webdunia
ಬುಧವಾರ, 11 ಜನವರಿ 2023 (08:44 IST)
ಬೆಂಗಳೂರು : ನಗರದಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು, ತಾಯಿ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿಗರನ್ನು ತಲ್ಲಣಗೊಳಿಸಿದೆ. ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದಲ್ಲದೇ ತುರ್ತು ಸಭೆ ನಡೆಸಿ ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿಯಲ್ಲಿ ಬೊಮ್ಮಾಯಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯೊಂದಿಗೆ ಸಭೆ ನಡೆಸಿದ್ದಾರೆ. ಮೆಟ್ರೋ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಕಾಮಗಾರಿಯ ಕಾಂಟ್ರಾಕ್ಟರ್ ಹಾಗೂ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಸೂಚನೆ ನೀಡಿದ್ದಾರೆ.

ಸಭೆ ಬಳಿಕ ಮಾತನಾಡಿದ ಬೊಮ್ಮಾಯಿ, ಮೆಟ್ರೋ ಪಿಲ್ಲರ್ ಕುಸಿತಕ್ಕೆ ಸಂಬಂಧಪಟ್ಟಂತೆ ತಪ್ಪಿತಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ಕಾಂಟ್ರಾಕ್ಟರ್ ಹಾಗೂ ಕಂಪನಿಯವರ ಮೇಲೆ ಕೇಸ್ ದಾಖಲಿಸಲು ಸೂಚಿಸಿದ್ದೇನೆ. ಜೊತೆಗೆ ಕಾಮಗಾರಿ ಎಂಜಿನಿಯರ್ನನ್ನು ಅಮಾನತು ಮಾಡಲು ಆದೇಶಿಸಿದ್ದೇನೆ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments