Select Your Language

Notifications

webdunia
webdunia
webdunia
webdunia

ನಾಳೆಯಿಂದ ಮೊಬೈಲ್ನಲ್ಲೇ ಮೆಟ್ರೋ ಟಿಕೆಟ್

ನಾಳೆಯಿಂದ ಮೊಬೈಲ್ನಲ್ಲೇ ಮೆಟ್ರೋ ಟಿಕೆಟ್
ಬೆಂಗಳೂರು , ಸೋಮವಾರ, 31 ಅಕ್ಟೋಬರ್ 2022 (15:24 IST)
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದೆ.

ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದ ಪ್ರಯಾಣಿಕರ ಸಮಯ ಉಳಿತಾಯ ಮಾಡಲು ಮೊಬೈಲ್ನಲ್ಲೇ ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸುವ ವಿಶೇಷ ಸೌಲಭ್ಯವನ್ನು ಜಾರಿಗೆ ತಂದಿದೆ.

ಮಂಗಳವಾರದಿಂದ (ನವೆಂಬರ್ 1) ಮೊಬೈಲ್ನಲ್ಲಿ ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಮೂಲಕ ಎಂಟ್ರಿ-ಎಕ್ಸಿಟ್ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ದೂರಮಾಡುವ ಉದ್ದೇಶವನ್ನೂ ಹೊಂದಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಯರ್ ಆರ್ಡರ್ ಮಾಡಲು ಹೋಗಿ ಭಾರೀ ಮೊತ್ತದ ಹಣ ಕಳ್ಕೊಂಡ!