Webdunia - Bharat's app for daily news and videos

Install App

ಇಂದು ರಾತ್ರಿ ಮೆಟ್ರೋ ರೈಲು ಸೇವೆ ಸ್ಥಗಿತ

Webdunia
ಶನಿವಾರ, 23 ಏಪ್ರಿಲ್ 2022 (09:23 IST)
ಬೆಂಗಳೂರು : ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ಸ್ಥಗಿತಗೊಳ್ಳಲಿದೆ.

ಇಂದಿರಾನಗರ ನಂತರ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಸಿವಿಲ್ ಸರ್ವಿಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿವರೆಗೂ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು,

ಈ ಅವಧಿಯಲ್ಲಿ ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಬಿಎಂಆರ್ಸಿಎಲ್, ಬೆಂಗಳೂರು ಮೆಟ್ರೋ ರೈಲು ನಿಗಮವು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.

ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments