Select Your Language

Notifications

webdunia
webdunia
webdunia
webdunia

ಇನ್ಮುಂದೆ ಹಾಲಿನ ದರ ಹೆಚ್ಚಳ !

ಇನ್ಮುಂದೆ ಹಾಲಿನ ದರ ಹೆಚ್ಚಳ !
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2022 (08:48 IST)
ಬೆಂಗಳೂರು : ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.

ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಲಾಗಿದೆ ಹೀಗಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ.

ರೈತರು ಹಾಗೂ ಕೆಎಂಎಫ್ನ ಜಿಲ್ಲಾ ಹಾಲು ಒಕ್ಕೂಡಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ತಾನೇ ಹಾಲಿನ ದರವನ್ನು ಏರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 

ಈ ಕುರಿತಂತೆ ನಗರದ ಖಾಸಗಿ ಹೋಟೆಲ್ನಲ್ಲಿ ಶುಕ್ರವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ?