Select Your Language

Notifications

webdunia
webdunia
webdunia
webdunia

ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ
ಬೆಂಗಳೂರು , ಭಾನುವಾರ, 4 ಜೂನ್ 2023 (10:14 IST)
ಬೆಂಗಳೂರು : ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.

ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು.

ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

ಇದರಿಂದ ಅದು 16 ಲಕ್ಷ ಲೀಟರ್ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯ