Webdunia - Bharat's app for daily news and videos

Install App

ಕೋವಿಡ್ ಹೆಚ್ಚಳ : ಎಲ್ಲಾ ರಾಜ್ಯ ಸಿಎಂ ಜೊತೆ ಮೋದಿ ಸಭೆ!

Webdunia
ಭಾನುವಾರ, 24 ಏಪ್ರಿಲ್ 2022 (12:24 IST)
ನವದೆಹಲಿ : ದೇಶದ ವಿವಿಧೆಡೆ ಮತ್ತೆ ಕೋವಿಡ್ ಏರುಗತಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.
 
ಆರೋಗ್ಯ ಅಧಿಕಾರಿಗಳು ಈ ಸಭೆಯಲ್ಲಿ ದೇಶದ ಕೋವಿಡ್ ಸ್ಥಿತಿಗತಿಯ ಮಾಹಿತಿ ಒದಗಿಸಲಿದ್ದಾರೆ.

ಸತತ 2ನೇ ವಾರ್ ಆರ್ ವ್ಯಾಲ್ಯೂ 2.1 ದೆಹಲಿಯಲ್ಲಿ ಸತತ ಎರಡನೇ ವಾರವೂ ಆರ್- ವ್ಯಾಲ್ಯೂ (ಒಬ್ಬರಿಂದ ಎಷ್ಟುಜನರಿಗೆ ಕೋವಿಡ್ ಸೋಂಕು ಹರಡುತ್ತಿದೆ ಎಂಬುದನ್ನು ತಿಳಿಸಲು ಇರುವ ಮಾನದಂಡ) 2ಕ್ಕಿಂತ ಹೆಚ್ಚು ದಾಖಲಾಗಿದೆ.

ಐಐಟಿ ಮದ್ರಾಸ್ನ ತಜ್ಞರ ತಂಡ ಹೇಳಿದೆ. ಸದ್ಯ ದೇಶದಲ್ಲೇ ಅತಿ ಹೆಚ್ಚು ಕೇಸು ದಾಖಲಾಗುತ್ತಿರುವ ದೆಹಲಿಯಲ್ಲಿ ಕಳೆದ ವಾರ 2.12ರಷ್ಟುಆರ್- ವ್ಯಾಲ್ಯೂ ದಾಖಲಾಗಿತ್ತು.

ಇದೀಗ ಏ.18-23 ವಾರದಲ್ಲೂ ಆರ್ ವ್ಯಾಲ್ಯೂ 2.1ರಷ್ಟಿದೆ. ಅಂದರೆ ಒಬ್ಬ ಸೋಂಕಿತನಿಂದ 2.1 ಜನರಿಗೆ ಸೋಂಕು ಹಬ್ಬುತ್ತಿದೆ ಎಂದು ತಜ್ಞರ ತಂಡ ಹೇಳಿದೆ.

ಆರ್ ವ್ಯಾಲ್ಯೂ 1ಕ್ಕಿಂತ ಕಡಿಮೆ ಇದ್ದರೆ ಸಾಂಕ್ರಾಮಿಕ ಮುಕ್ತಾಯದ ಹಂತದ ಸಾಗುತ್ತಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ಕಳೆದ 3 ತಿಂಗಳಲ್ಲೇ ಮೊದಲ ಬಾರಿಗೆ, ಕಳೆದ ವಾರ ಆರ್ ವ್ಯಾಲ್ಯೂ ಶೇ.1ರ ಗಡಿ ದಾಟುವ ಮೂಲಕ ಆತಂಕ ಹುಟ್ಟುಹಾಕಿತ್ತು.

ಇದೀಗ ಸತತ 2ನೇ ವಾರ ಕೂಡಾ ಹರಡುವಿಕೆ ಪ್ರಮಾಣ ಹೆಚ್ಚು ಕಡಿಮೆ ಅದೇ ಮಟ್ಟದಲ್ಲಿ ಇರುವ ಕಾರಣ, ಮುಂದಿನ ವಾರಗಳಲ್ಲಿ ಸೋಂಕಿತರ ಪ್ರಮಾಣ ಮತ್ತಷ್ಟುಹೆಚ್ಚುವ ಆತಂಕ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments