ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ಗೆ ಬರುವ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮೆಜೆಸ್ಟಿಕ್ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.