Select Your Language

Notifications

webdunia
webdunia
webdunia
webdunia

ದಲಿತರ ಹಿತಾಸಕ್ತಿ ಕಾಪಾಡುವಲ್ಲಿ ಮೋದಿ ಸರ್ಕಾರ ವಿಫಲ- ರಾಹುಲ್ ಗಾಂಧಿ ವಾಗ್ದಾಳಿ

ದಲಿತರ ಹಿತಾಸಕ್ತಿ ಕಾಪಾಡುವಲ್ಲಿ ಮೋದಿ ಸರ್ಕಾರ ವಿಫಲ- ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ , ಸೋಮವಾರ, 30 ಜುಲೈ 2018 (12:19 IST)
ನವದೆಹಲಿ : ದಲಿತರ ಹಿತಾಸಕ್ತಿ ಕಾಪಾಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಾಗ್ದಾಳಿ ನಡೆಸಿದ್ದಾರೆ. 


‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳು ಹೆಚ್ಚುತ್ತಿದ್ದರೂ, ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ವಿಫಲವಾಗಿವೆ’ ಎಂದು ಪಕ್ಷದ ಪರಿಶಿಷ್ಟ ಜಾತಿ ವಿಭಾಗಕ್ಕೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.


‘ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಭಯದ ವಾತಾವರಣ ಮತ್ತು ಕಾನೂನುರಹಿತ ಸ್ಥಿತಿಗೆ ಮೋದಿ ಸರ್ಕಾರ ಕಾರಣವಾಗಿದೆ. ಈ ಪರಿಸ್ಥಿತಿ ದೇಶಾದ್ಯಂತ ಇರುವುದು ಮಾತ್ರವಲ್ಲದೇ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ’ ಎಂದು ಅವರು  ಹೇಳಿದ್ದಾರೆ.


‘ಈ ವಿವೇಚನಾರಹಿತ ಹಿಂಸೆಯ ಸಂತ್ರಸ್ತರ ಬಳಿ ತೆರಳಿ ಅವರನ್ನು ಬಹಿರಂಗವಾಗಿ ಬೆಂಬಲಿಸುವ ಕಾರ್ಯ ಆಗಬೇಕಿದೆ’ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

2-3 ದಿನದಲ್ಲೇ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ: ಡಿಸಿಎಂ ಪರಮೇಶ್ವರ್