Publish Date: Sun, 20 Nov 2022 (14:27 IST)
Updated Date: Sun, 20 Nov 2022 (15:25 IST)
ಗಾಂಧೀನಗರ : 135 ಜನರ ಸಾವಿಗೆ ಕಾರಣವಾದ ಗುಜರಾತ್ನ ಮೋರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಮೋರ್ಬಿ ಪುರಸಭೆಯನ್ನು ಗುಜರಾತ್ ಹೈಕೋರ್ಟ್ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪುರಸಭೆ ಪ್ರತಿಕ್ರಿಯೆ ನೀಡಲು ವಿಫಲವಾದ ಬೆನ್ನಲ್ಲೇ ಅಫಿಡವಿಟ್ ಸಲ್ಲಿಸಿ ಇಲ್ಲವೇ 1 ಲಕ್ಷ ರೂ.
ದಂಡ ಪಾವತಿಸಿ ಎಂದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರಿದ್ದ ಪೀಠ ಎಚ್ಚರಿಕೆ ನೀಡಿದೆ.