Publish Date: Thu, 23 Jun 2022 (11:26 IST)
Updated Date: Thu, 23 Jun 2022 (10:40 IST)
ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.
ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ನಿರೀಕ್ಷೆ ಇದ್ದು,
ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಈ ಜಿಲ್ಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.