ಚಂಡೀಗಢ : ವಿಜಯದಶಮಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನ ಧಾರುಣವಾಗಿ ಮೃತಪಟ್ಟಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದ ಜೋದಾ ಪಾಟ್ಕರ್ ನಲ್ಲಿ ನಡೆದಿದೆ.
ಅಮೃತಸರದ ಜೋದಾ ಪಾಟ್ಕರ್ ನಲ್ಲಿ ವಿಜಯದಶಮಿಯ ಪ್ರಯುಕ್ತ ರಾವಣನ ಪ್ರತಿಕೃತಿ ಸಂಹರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಪಕ್ಕದಲ್ಲೆ ರೈಲು ಹಳಿ ಇದ್ದು ಅದರ ಮೇಲೆ ನಿಂತು ಕೆಲವರು ಕಾರ್ಯಕ್ರಮ ವೀಕ್ಷಿಸುತ್ತಿದ್ದರು.
ಆದರೆ ಕಾರ್ಯಕ್ರಮದ ವೇಳೆ ಪಟಾಕಿ ಹೊಡೆಯುತ್ತಿದ್ದ ಕಾರಣ ರೈಲು ಬರುತ್ತಿರುವ ಶಬ್ದ ಯಾರಿಗೂ ಕೇಳದಿದ್ದರಿಂದ ಜನರ ಮೇಲೆ ಏಕಾಏಕಿ ರೈಲು ಹರಿದು 50 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅನೇಕರು ಗಾಯಗೊಂಡು ಸಾವು ನೋವಿನೊಡನೆ ಹೋರಾಡುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿವೆ.
ಈ ಬಗ್ಗೆ ಕಾರ್ಯಕ್ರಮ ಆಯೋಜಕರ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮ ನಿಗದಿಪಡಿಸುವ ಮುನ್ನ ರೈಲಿನ ಸಂಪೂರ್ಣ ಮಾಹಿತಿಯನ್ನು ಅವರು ಪಡೆದುಕೊಳ್ಳಬೇಕಿತ್ತು, ಅಥವಾ , ಕಾರ್ಯಕ್ರಮ ನಡೆಯುವ ವೇಳೆ ಜನರು ಇಲ್ಲವೇ ರೈಲನ್ನು ತಡೆಯುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.