ನವದೆದಲಿ : 2021ರ ಐಟಿ ನಿಯಮ ಉಲ್ಲಂಘಿಸಿದ್ದಕ್ಕಾಗಿ 67 ಪೋರ್ನ್ ವೆಬ್ಸೈಟ್ಗಳನ್ನು ಬ್ಲಾಕ್ ಮಾಡಿವಂತೆ ಕೇಂದ್ರ ಸರ್ಕಾರ ಇಂರ್ಟರ್ನೆಟ್ ಸೇವಾ ಪೂರೈಕೆದಾರರಿಗೆ ನೋಟಿಸ್ ನೀಡಿದೆ.
ಭಾರತದಲ್ಲಿ ಅಶ್ಲೀಲ ಅಥವಾ ಪೋರ್ನ್ ವೆಬ್ಸೈಟ್ಗಳನ್ನು ಪ್ರಕಟಿಸುವುದು ಅಥವಾ ವೀಕ್ಷಿಸುವುದು ಕಾನೂನು ಬಾಹಿರ. ಆದರೂ ವಿವಿಧ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 67 ಪೋರ್ನ್ ವೆಬ್ಸೈಟ್ಗಳನ್ನು ಬ್ಲಾಕ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ.
ಪುಣೆ ನ್ಯಾಯಾಲಯದ ಆದೇಶದ ಆಧಾರದ ಮೇಲೆ 63 ವೆಬ್ಸೈಟ್ಗಳು ಹಾಗೂ ಉತ್ತರಾಖಂಡ ಹೈಕೋರ್ಟ್ ಆದೇಶದ ಆಧಾರದ ಮೇಲೆ 4 ವೆಬ್ಸೈಟ್ಗಳನ್ನು ನಿರ್ಬಂಧಿಸುವಂತೆ ಟೆಲಿಕಾಂ ಸಂಸ್ಥೆ ಇಮೇಲ್ ಮೂಲಕ ಇಂಟರ್ನೆಟ್ ಸೇವಾ ಪೂರೈಕೆದಾರ ಕಂಪೆನಿಗಳಿಗೆ ಸೂಚಿಸಿದೆ.