ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

Webdunia
ಸೋಮವಾರ, 24 ಜುಲೈ 2023 (07:05 IST)
ಬೆಂಗಳೂರು : ಜೂನ್ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈನಲ್ಲಿ ಚುರುಕು ಪಡೆದುಕೊಂಡಿದ್ದು, ಜುಲೈ ಒಂದರಿಂದ ಇಂದಿನ ವರೆಗೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
 
ಜುಲೈ 1ರಿಂದ ಜುಲೈ 22ರವೆರೆಗೆ ವಾಡಿಕೆಯಂತೆ ಸರಾಸರಿ 192ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದ್ರೆ, ಇದೀಗ ಜುಲೈ 1ರಿಂದ ಜುಲೈ 22ರವರೆಗೆ 215ಮಿಲಿ ಮೀಟರ್ ಮಳೆಯಾಗಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಅದರಲ್ಲೂ ಕರ್ನಾಟಕದ ಪಶ್ಚಿಮ ಘಟ್ಟದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಇದರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಸೇತುವೆಗಳ ಮುಳುಗಡೆಯಾಗಿದ್ದು, ಸಂಚಾರ ಬಂದ್ ಆಗಿವೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದೆ. ರಾಜ್ಯದಲ್ಲಿ ಈ ಬಾರಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚುವರಿ ಮಳೆ ಆಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ಒಳಹರಿವು ಹೆಚ್ಚಳವಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣ ಶೇ.15ರಿಂದ ಶೇ.20ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯದ ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments