ಬೆಂಗಳೂರು : ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.
ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು.
ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.
ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ.