Publish Date: Sun, 08 Jul 2018 (08:16 IST)
Updated Date: Sun, 08 Jul 2018 (08:18 IST)
ಮೈಸೂರು: ಪ್ರಧಾನಿ ಮೋದಿ ಪರವಾಗಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮಾತನಾಡಿದ್ದು, ಮತ್ತೆ ಅವರ ರಾಜಕೀಯ ಸೇರ್ಪಡೆ ಬಗ್ಗೆ ಗುಸು ಗುಸು ಶುರುವಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಯದುವೀರ್ ಪ್ರಧಾನಿ ಮೋದಿ ಮತ್ತೊಮ್ಮೆ ಗೆದ್ದು ಬರಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಭಿವೃದ್ಧಿ ಮಾಡಲು ಐದು ವರ್ಷ ಸಾಲದು. ಮತ್ತಷ್ಟು ಅಭಿವೃದ್ಧಿ ಮಾಡಲು ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆಂದು ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಅರಮನೆಗೆ ಭೇಟಿ ನೀಡಿದ್ದಲ್ಲದೆ, ರಾಜವಂಶಸ್ಥರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಲೋಕಸಭೆ ಚುನಾವಣೆಗೆ ಮೊದಲು ಯದುವೀರ್ ಮೋದಿ ಪರ ಬ್ಯಾಟಿಂಗ್ ಮಾಡಿರುವುದು ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ಸುದ್ದಿಗೆ ಪುಷ್ಟಿ ಸಿಕ್ಕಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.