Select Your Language

Notifications

webdunia
webdunia
webdunia
webdunia

ಮೈಶುಗರ್ ಸಕ್ಕರೆ ಕಾರ್ಖಾನೆ ಪುನರಾರಂಭ

ಮೈಶುಗರ್ ಸಕ್ಕರೆ ಕಾರ್ಖಾನೆ ಪುನರಾರಂಭ
ಮಂಡ್ಯ , ಶುಕ್ರವಾರ, 2 ಸೆಪ್ಟಂಬರ್ 2022 (08:01 IST)
ಮಂಡ್ಯ : ಕನ್ನಂಬಾಡಿ ಕಟ್ಟೆ ಹೇಗೆ ಹಳೆ ಮೈಸೂರು ಭಾಗದ ಜೀವನಾಡಿ, ಹಾಗೆ ಮಂಡ್ಯದ ಜನರಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಜೀವನಾಡಿ.

ಕಳೆದ ನಾಲ್ಕು ವರ್ಷಗಳಿಂದ ಬಂದ್ ಆಗಿದ್ದ ಈ ಕಾರ್ಖಾನೆ ಇದೀಗ ಮತ್ತೆ ಪುನರಾರಂಭಗೊಂಡಿದೆ. ಈ ಮೂಲಕ ಸಕ್ಕರೆ ನಾಡಿನ ಜನರಿಗೆ ರಾಜ್ಯ ಸರ್ಕಾರ ಗೌರಿ-ಗಣೇಶ ಹಬ್ಬದ ಗಿಫ್ಟ್ ನೀಡಿದೆ.

ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಅಂದ್ರೆ ಅದು ಮಂಡ್ಯದ ಮೈಶುಗರ್ ಕಾರ್ಖಾನೆ. ಒಂದು ಕಾಲದಲ್ಲಿ ಗತವೈಭವಕ್ಕೆ ಕಾರಣವಾಗಿದ್ದ ಈ ಕಾರ್ಖಾನೆ ಕೊಡುವ ದರವೇ ಇಡೀ ರಾಜ್ಯದ ಕಬ್ಬಿನ ದರವನ್ನು ನಿರ್ಧಾರ ಮಾಡ್ತಿತ್ತು.

ಅಂತಹ ಇತಿಹಾಸ ಪ್ರಸಿದ್ಧ ಕಾರ್ಖಾನೆ ಅವ್ಯಾಹತ ಭ್ರಷ್ಟಾಚಾರ, ರಾಜಕೀಯ ಹಪಾಹಪಿಗೆ ಸಿಲುಕಿ ನಶಿಸುವ ಹಂತ ತಲುಪಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಕಾರ್ಖಾನೆ ಸಂಪೂರ್ಣ ಸ್ತಬ್ಧವಾಗಿತ್ತು. ಕಾರ್ಖಾನೆ ಸ್ಥಗಿತದಿಂದ ಇಡೀ ಮಂಡ್ಯ ಜಿಲ್ಲೆಯ ಆರ್ಥಿಕ ಸ್ಥಿತಿ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ರು.

ಈ ಕಾರ್ಖಾನೆ ಆರಂಭಕ್ಕೆ ನಿರಂತರವಾಗಿ, ಸಾಕಷ್ಟು ಹೋರಾಟಗಳು ನಡೆದಿದ್ವು. ಕಾಲಕಳೆದಂತೆ ಮೈಶುಗರ್ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳು ಕೂಡ ಕವಲೊಡೆದು ಗೊಂದಲದ ಗೂಡಾಗಿತ್ತು.

ಕೆಲವರು ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಆರಂಭಕ್ಕೆ ಪಟ್ಟು ಹಿಡಿದ್ರೆ. ಇನ್ನು ಕೆಲವರು ಖಾಸಗಿಯಾದರೂ ಸರಿ, ಓ ಅಂಡ್ ಎಂ ಆದ್ರೂ ಸರಿ. ಹೇಗಾದ್ರೂ ಆಗ್ಲೀ ಮೊದಲು ಕಾರ್ಖಾನೆ ಆರಂಭವಾಗ್ಲೀ ಅಂತಾ ಒತ್ತಾಯಿಸಿದ್ರು. ಇದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿತ್ತು. ಈ ಹಿಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪುನರಾರಂಭಿಸುವಂತೆ ಹೇಳಲಾಗಿತ್ತು. ಅದಕ್ಕೆ ಪೂರಕ ಎಂಬಂತೆ ಪುನಾರಂಭವಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ನುಡಿದಂತೆ ನಡೆಯುವವರು ಯೋಗಿ : ಬೊಮ್ಮಾಯಿ