Select Your Language

Notifications

webdunia
webdunia
webdunia
webdunia

ಫಲಿತಾಂಶದ ಬೆನ್ನಲ್ಲೇ ಕಲಬುರಗಿಗೆ ಮೋದಿ ಭೇಟಿ

ಫಲಿತಾಂಶದ ಬೆನ್ನಲ್ಲೇ ಕಲಬುರಗಿಗೆ ಮೋದಿ ಭೇಟಿ
ಬೆಂಗಳೂರು , ಶುಕ್ರವಾರ, 11 ಮಾರ್ಚ್ 2022 (11:51 IST)
ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಬಿಜೆಪಿ ಚಿತ್ತ ಇದೀಗ ಕರ್ನಾಟಕದ ರಾಜಕೀಯದತ್ತ ನೆಟ್ಟಿದೆ.

ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಗೆ ಮುಂದಾಗಿರುವುದು ಭಾರೀ ಕುತೂಹಲ ಮೂಡಿಸಿದೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಬಿಜೆಪಿಗೆ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣಾ ತಯಾರಿಗೆ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಭಾಗವೆಂಬಂತೆ ಇದೀಗ ಮೋದಿ ಮಾರ್ಚ್ 24 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ವಿಶೇಷವಾಗಿ ಮೋದಿ ಕಲಬುರಗಿಗೆ ಭೇಟಿ ಕೊಡಲಿದ್ದಾರೆ ಎಂದು ಮಾಹಿತಿ ಹೊರಬಿದ್ದಿದ್ದು, ಕಲಬುರಗಿಗೆ ಯಾಕೆ ಎಂಬ ಕುತೂಹಲ ಮೂಡಲಾರಂಭಿಸಿದೆ. 

 
ಸದ್ಯದ ಮಾಹಿತಿ ಪ್ರಕಾರ ಮೋದಿ ಕೇಂದ್ರದ ಮಹತ್ವದ ಸ್ವಾಮಿತ್ವ ಯೋಜನೆಯ ಪ್ರಾಯೋಗಿಕ ಚಾಲನೆ ನೀಡಲು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಹಿಂದಿನ ಇತಿಹಾಸವನ್ನು ಗಮನಿಸಿದರೆ, ಈ ಭೇಟಿಯ ಹಿಂದೆ ಭಾರೀ ನಿರೀಕ್ಷೆ ಮತ್ತು ಲೆಕ್ಕಾಚಾರ ಅಡಗಿದೆ. ನಾಲ್ಕು ವರ್ಷಗಳ ಹಿಂದೆ ಕರ್ನಾಟಕದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಮುನ್ನ ಮೋದಿ ಕಲಬುರಗಿಗೆ ಭೇಟಿ ನೀಡಿದ್ದರು. ಅಲ್ಲದೆ ಚುನಾವಣೆ ಕಹಳೆಯನ್ನು ಕೂಡ ಕಳಬುರಗಿಯಿಂದಲೇ ಮೊಳಗಿಸಿದ್ದರು.

ಮೋದಿ ನಾಲ್ಕು ವರ್ಷಗಳ ಹಿಂದೆ ಕಲಬುರಗಿಗೆ ಭೇಟಿ ನೀಡಿ ಆಗಿನ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಚುನಾವಣೆ ಕಹಳೆ ಮೊಳಗಿಸಿದ್ದರು.

ಇದೀಗ ಮತ್ತೆ ಮೋದಿ ಚುನಾವಣೆಗೆ ವರ್ಷಗಳು ಬಾಕಿ ಇರುವಂತೆ ಈ ಬಾರಿಯೂ ಕಲಬುರಗಿಯಿಂದಲೇ ಚುನಾವಣಾ ಸಿದ್ಧತೆಯ ಕಹಳೆ ಮೊಳಗಿಸ್ತಾರಾ ಎಂಬ ಕೂತುಹಲ ಕಾಡಲಾರಂಭಿಸಿದೆ. ಆದರೆ ಇನ್ನೂ ಕೂಡ ಕಲಬುರಗಿ ಭೇಟಿಯ ಬಗ್ಗೆ ಪ್ರಧಾನಿ ಕಚೇರಿಯಿಂದ ದೃಢವಾಗಿಲ್ಲ. ಸಧ್ಯದಲ್ಲೇ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. 


Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಕಾಲ್ ಸೆಂಟರ್ ತೆರೆದು ಪಂಗನಾಮ: ಇಬ್ಬರ ಬಂಧನ