ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ

Webdunia
ಮಂಗಳವಾರ, 20 ಜೂನ್ 2023 (10:29 IST)
ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಆದ್ರೆ ಏಕಕಾಲಕ್ಕೆ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ದಾಂಗುಡಿ ಇಡುತ್ತಿರುವುದರಿಂದ KSRTC ಸಿಬ್ಬಂದಿ ಹೈರಾಣಾಗುತ್ತಿದ್ದಾರೆ.
 
ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಪ್ರವಾಸಿ ಸ್ಥಳಗಳಿಗೆ ತೆರಳುವವರಿಗೆ ಮಾರ್ಗಸೂಚಿ ನಿಗದಿಪಡಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರು ಏಕಕಾಲಕ್ಕೆ ಧಾವಿಸುತ್ತಿರುವುದರಿಂದ ಬಸ್ ಕಿಟಕಿ, ಬಾಗಿಲುಗಳು ಮುರಿಯೋದು, ಡ್ರೈವರ್ ಸೀಟಿನಲ್ಲೇ ಹತ್ತೋದು ಕಂಡುಬರುತ್ತಿದೆ. ಆದ್ದರಿಂದ ಮಾರ್ಗಸೂಚಿ ನಿಗದಿ ಮಾಡಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳೊಂದಿಗೆ ಸಭೆಯಲ್ಲಿ ನಿರ್ಧರಿಸಿದ್ದಾರೆ. 

ಜನರು ಪ್ರಯಾಣ ಮಾಡಲಿ, ಆದ್ರೆ ಎಲ್ಲರೂ ಒಂದೇ ಬಾರಿಗೆ ಹೋಗುವುದರಿಂದ ಜನದಟ್ಟಣೆ ಆಗ್ತಿದೆ. ಶಕ್ತಿ ಯೋಜನೆ 5 ವರ್ಷವೂ ಇರುತ್ತೆ, ಅದರಲ್ಲಿ ಯಾರಿಗೂ ಆತಂಕ ಬೇಡ. ಆದ್ರೆ ಎಲ್ಲರೂ ಒಂದೇ ದಿನ ಪ್ರಯಾಣ ಮಾಡೋದ್ರಿಂದ ಸಮಸ್ಯೆಯಾಗುತ್ತಿದೆ. ಚಾಲಕರು, ನಿರ್ವಾಹಕರಿಗೂ ಕಷ್ಟವಾಗ್ತಿದೆ. ಹಾಗಾಗಿ ಆನ್ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಇನ್ನೆರಡೇ ದಿನದಲ್ಲಿ ಮಾರ್ಗಸೂಚಿ ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments