Select Your Language

Notifications

webdunia
webdunia
webdunia
webdunia

ಹೊಸ ವರ್ಷಾಚರಣೆಗೆ ನ್ಯೂ ರೂಲ್ಸ್?

ಹೊಸ ವರ್ಷಾಚರಣೆಗೆ ನ್ಯೂ ರೂಲ್ಸ್?
ಬೆಂಗಳೂರು , ಮಂಗಳವಾರ, 27 ಡಿಸೆಂಬರ್ 2022 (13:08 IST)
ಬೆಂಗಳೂರು : ಚೀನಾದಲ್ಲಿ ದಾಂಗುಡಿ ಇಟ್ಟಿರುವ ಬಿಎಫ್.7 ಆತಂಕದ ಮಧ್ಯೆ ರಾಜ್ಯ ಸರ್ಕಾರ ಕೊರೊನಾಗೆ ಮೂಗುದಾರ ಹಾಕಲು ಮುಂದಾಗಿದೆ.

ರಾಜ್ಯಾದ್ಯಂತ ಮತ್ತೆ ಮಾಸ್ಕ್ ಕಡ್ಡಾಯ ರೂಲ್ಸ್ ಜಾರಿ ಮಾಡಲಾಗಿದೆ. ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಮತ್ತೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ.

ಹೊಸ ವರ್ಷದ ಆಚರಣೆಗೆ ಸರ್ಕಾರ ಮಾಸ್ಕ್ ಕಡ್ಡಾಯ ಮಾಡಿದ್ದಲ್ಲದೇ ಸಂಭ್ರಮಾಚರಣೆಗೆ ಮಧ್ಯರಾತ್ರಿ 1 ಗಂಟೆವರೆಗೆ ಡೆಡ್ಲೈನ್ ನೀಡಲಾಗಿದೆ. ಪಾರ್ಟಿಗಳಲ್ಲಿ ಹಿರಿಯರು, ಮಕ್ಕಳು, ಗರ್ಭಿಣಿಯರು ಭಾಗಿದಂತೆ ಪಾರ್ಟಿ ಆಯೋಜಕರು ನೋಡಿಕೊಳ್ಳಬೇಕು.

ಮಧ್ಯರಾತ್ರಿ 1 ಗಂಟೆ ನಂತರ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಇತರೆಡೆ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರಲ್ಲ ಮತ್ತು ಪಬ್, ಹೋಟೆಲ್, ರೆಸ್ಟೋರೆಂಟ್ ಮಧ್ಯರಾತ್ರಿ 1 ಗಂಟೆ ನಂತರ ಬಂದ್ ಮಾಡುವುದು ಕಡ್ಡಾಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚೀನಾಗೆ ಹೋಲಿಕೆ ಮಾಡೋದು ಬೇಡ : ಸುಧಾಕರ್