Webdunia - Bharat's app for daily news and videos

Install App

ಹೊಸ ವರ್ಷಾಚರಣೆ : ಮಧ್ಯರಾತ್ರಿ 2 ಗಂಟೆವರೆಗೂ ಅವಕಾಶ ಸಾಧ್ಯತೆ

Webdunia
ಶುಕ್ರವಾರ, 16 ಡಿಸೆಂಬರ್ 2022 (12:52 IST)
ಬೆಂಗಳೂರು : ಕೋವಿಡ್ ಬಳಿಕ ಅದ್ಧೂರಿ ಹೊಸ ವರ್ಷ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಸಿದ್ಧವಾಗುತ್ತಿದ್ದು, ಮೋಜು-ಮಸ್ತಿ ಸಂಭ್ರಮದ ರಂಗು ಮತ್ತಷ್ಟು ಹೆಚ್ಚಿಸಲು ಸಮಯ ನಿಗದಿ ಮಾಡುವ ಬಗ್ಗೆ ಪೊಲೀಸರು ಚಿಂತನೆ ನಡೆಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿ ಹೊಸ ಸಂಭ್ರಮಾಚರಣೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಪ್ರತಿ ಬಾರಿ ಸಂಭ್ರಮಾಚರಣೆನ್ನ ತಡರಾತ್ರಿ 1 ಗಂಟೆ ವರೆಗೆ ಮಾತ್ರ ನಿಗದಿ ಮಾಡಲಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಸಮಯಾವಕಾಶ ಕಲ್ಪಿಸಿಕೊಡಲು ಚಿಂತನೆ ಮಾಡಲಾಗಿದೆ. 

ಈ ಬಾರಿ ಬೆಂಗಳೂರು ಪೊಲೀಸರು ಹೊಸ ವರ್ಷ ಸಂಭ್ರಮಾಚರಣೆಗೆ ಮಧ್ಯರಾತ್ರಿ 2 ಗಂಟೆಯ ತನಕ ಮೋಜು-ಮಸ್ತಿಗೆ ಅವಕಾಶ ಕಲ್ಪಿಸಿಕೊಡುವ ಚಿಂತನೆಯಲ್ಲಿದ್ದಾರೆ.

ಇಂದು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಸಂಭ್ರಮಾಚರಣೆಗೆ ಎರಡು ಗಂಟೆಯ ತನಕ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು, 2 ಗಂಟೆಯ ಸಮಯ ಅವಕಾಶ ನಿಗದಿ ಮಾಡಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments