Webdunia - Bharat's app for daily news and videos

Install App

ಹಸುಗಳ ತೇಗು, ಹೂಸಿಗೂ ತೆರಿಗೆ ವಿಧಿಸಿದ ನ್ಯೂಜಿಲೆಂಡ್!

Webdunia
ಶುಕ್ರವಾರ, 14 ಅಕ್ಟೋಬರ್ 2022 (10:04 IST)
ಕ್ರೈಸ್ಟ್ ಚರ್ಚ್ : ಹಸುಗಳು ತೇಗಿದರೆ ಹಾಗೂ ಹೂಸು ಬಿಟ್ಟರೆ ನ್ಯೂಜಿಲೆಂಡ್ ರೈತರು ಇನ್ನು ಮುಂದೆ ತೆರಿಗೆ ಪಾವತಿಸಬೇಕು.
 
ಹೌದು. ವಿಶ್ವದಲ್ಲೇ ಮೊದಲ ಬಾರಿಗೆ ನ್ಯೂಜಿಲೆಂಡ್ ಸರ್ಕಾರ ಹಸುಗಳು ತೇಗಿದರೆ ಹಾಗೂ ಹೂಸು ಬಿಟ್ಟರೆ ಅವುಗಳನ್ನು ಸಾಕಿದ ರೈತರ ಮೇಲೆ ತೆರಿಗೆ ವಿಧಿಸಲು ಮುಂದಾಗಿದೆ.

ಕೃಷಿ ಉದ್ಯಮದಿಂದ ಏರುತ್ತಿರುವ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ನಿಯಂತ್ರಿಸಲು ಸರ್ಕಾರ ಹೊಸ ಹವಾಮಾನ ಬದಲಾವಣೆ ಪ್ರಸ್ತಾವನೆ ಸಲ್ಲಿಸಿದೆ ಎಂದು ವರದಿಯಾಗಿದೆ. 

ನ್ಯೂಜಿಲೆಂಡ್ನಲ್ಲಿ ಭಾರೀ ಪ್ರಮಾಣದಲ್ಲಿ ಹೈನೋದ್ಯಮ ನಡೆಯುತ್ತಿದೆ. ದನದ ಮೂತ್ರದಲ್ಲಿ ನೈಟ್ರಸ್ ಆಕ್ಸೈಡ್ ಇದ್ದರೆ ಹಸುವಿನ ಹೂಸಿನಲ್ಲಿ ಮೀಥೇನ್ ಅನಿಲ ಇದೆ. ಇದರಿಂದಾಗಿ ಹಸಿರು ಮನೆ ಪರಿಣಾಮ ಹೆಚ್ಚಾಗುತ್ತದೆ ಎನ್ನುವುದು ನ್ಯೂಜಿಲೆಂಡ್ ಸರ್ಕಾರದ ವಾದ.

ಮಿತಿಮೀರಿದ ಹೈನುಗಾರಿಕೆ ನಿಯಂತ್ರಿಸಿ ಇಂಗಾಲಕ್ಕೆ ಕಡಿವಾಣ ಹಾಕುವ ಉದ್ದೇಶವನ್ನು ಸರ್ಕಾರ ಹೊಂದಿದೆ. ತೆರಿಗೆಯಿಂದ ಸಂಗ್ರಹವಾದ ಹಣವನ್ನು ಹವಾಮಾನ ಸ್ನೇಹಿ ತಂತ್ರಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಸಂಶೋಧನೆ, ಹೊಸ ತಂತ್ರಜ್ಞಾನಗಳು ಮತ್ತು ಸಬ್ಸಿಡಿಗಳಿಗೆ ಧನಸಹಾಯ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments