Publish Date: Sun, 02 Jan 2022 (14:16 IST)
Updated Date: Sun, 02 Jan 2022 (19:18 IST)
ಬೆಳಗಾವಿ : ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ನಾಳೆ, ನಾಡಿದ್ದು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಾರದಲ್ಲಿ ಇಡೀ ದೇಶದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿದೆ. ಅದೇ ರೀತಿ ಓಮಿಕ್ರಾನ್ ಕೇಸ್ ಕೂಡ ಹೆಚ್ಚಳವಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದ ಬೆಳಗಾವಿ ಸೇರಿ ಅಕ್ಕಪಕ್ಕದ ಚೆಕ್ ಪೋಸ್ಟ್ಗಳನ್ನು ಬೀಗಿ ಮಾಡಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಸುಮಾರು 11 ಚೆಕ್ ಪೋಸ್ಟ್ ಮಾಡಲಾಗಿದೆ.
ಕೊರೊನಾಕ್ಕೆ ನಿರ್ಬಂಧ ಅಷ್ಟೇ ಅಲ್ಲದೇ ತಯಾರಿಯನ್ನು ಸಹ ಮಾಡಿದ್ದಾರೆ. ಆಕ್ಸಿಜನ್ ಕೊರತೆ ನಿಗಿಸಲು ಕ್ರಮ ವಹಿಸಲಾಗಿದೆ. ಐಸಿಯು, ಬೆಡ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಇಡೀ ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ಐಸಿಯು ಬೆಡ್ಗಳನ್ನು ಮಾಡಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ.