Publish Date: Mon, 13 Jun 2022 (09:07 IST)
Updated Date: Mon, 13 Jun 2022 (11:09 IST)
ಬೆಂಗಳೂರು : ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ.
ಪಾಲಿಕೆಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ.
ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ.
ಈ ಹಿಂದೆ ಬಳ್ಳಾರಿ ಡಿಸಿಯಾಗಿ ಕಾರ್ಯ ನಿರ್ವಹಿಸಿದ ಮನೋಹರ್ ಅವರು ಬಳ್ಳಾರಿಯಲ್ಲಿ ರಾತ್ರಿ ಶಾಲೆ ಯೋಜನೆ ಜಾರಿಗೆ ತಂದು ಯಶಸ್ಸು ಕಂಡಿದ್ರು. ಪ್ರಸ್ತುತ ಬೆಂಗಳೂರಿನಲ್ಲೂ ಇದೇ ರೀತಿ ಯೋಜನೆ ರೂಪಿಸುತ್ತಿದ್ದಾರೆ.
ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ ಸಾಧಕ ಭಾದಕಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಡಲಿದ್ದಾರೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.