Select Your Language

Notifications

webdunia
webdunia
webdunia
webdunia

ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್!

ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್!
ಬೆಂಗಳೂರು , ಭಾನುವಾರ, 13 ಮಾರ್ಚ್ 2022 (09:23 IST)
ಬೆಂಗಳೂರು : ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

ಮೇಲ್ಸೇತುವೆಯಲ್ಲಿ ಭಾರೀ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದಕ್ಕೆ ಪೊಲೀಸರಿಗೆ ಕಷ್ಟವಾಗುತ್ತಿರುವ ಹಿನ್ನೆಲೆ,

ಜೊತೆಗೆ ಭಾರೀ ವಾಹನಗಳ ತಡೆಗಟ್ಟಲು ಅಳವಡಿಸಿರುವ ಗ್ಯಾಂಟ್ರಿ ಪದೇ, ಪದೇ ಡ್ಯಾಮೇಜ್ ಆಗುತ್ತಿರುವ ಕಾರಣ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ನಿರ್ಬಂಧ ಹೇರಿದ್ದಾರೆ. 

ರಾತ್ರಿ 12 ಗಂಟೆ ನಂತರ ಸರ್ವಿಸ್ ರಸ್ತೆ ಮೂಲಕ ದಾಸರಹಳ್ಳಿ, ಪೀಣ್ಯ, ಜಾಲಹಳ್ಳಿ ಕ್ರಾಸ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.

ಗೊರಗುಂಟೆಪಾಳ್ಯದಿಂದ ಔಟರ್ ರಿಂಗ್ ರೋಡ್ ಬಳಸಿ ನಗರದಿಂದ ಹೊರ ಹೋಗಬಹುದು ಮತ್ತು ನಗರಕ್ಕೆ ಬರುವ ವಾಹನಗಳು ಮಾದಾವಾರ ಬಳಿ ನೈಸ್ ರಸ್ತೆ ಬಳಸಿಕೊಂಡು ಬರಬಹುದು ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡನ ಮರ್ಮಾಂಗಕ್ಕೆ ಒದ್ದು ಕೊಂದ ಮಹಿಳೆ