Publish Date: Tue, 30 Nov 2021 (17:04 IST)
Updated Date: Tue, 30 Nov 2021 (21:34 IST)
ಬೆಂಗಳೂರು : ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.