Select Your Language

Notifications

webdunia
webdunia
webdunia
webdunia

ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್ ಅಗತ್ಯ ಇಲ್ಲ

ದೆಹಲಿ
ನವದೆಹಲಿ , ಶುಕ್ರವಾರ, 4 ಫೆಬ್ರವರಿ 2022 (14:34 IST)
ನವದೆಹಲಿ : ಕಾರುಗಳಲ್ಲಿ ಒಂಟಿಯಾಗಿ ಸಂಚರಿಸುವವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ನಿರ್ಬಂಧಗಳನ್ನು ಪರಿಶೀಲಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಿತ್ತು. ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕೋವಿಡ್ ನಿಯಮಗಳ ಬಗೆಗಿನ ಕೆಲವು ವಲಯಗಳಲ್ಲಿ ವಿನಾಯಿತಿ ದೊರಕಿದೆ.

ದೆಹಲಿಯಲ್ಲಿ ಒಂಟಿಯಾಗಿ ಕಾರಿನಲ್ಲಿ ಪ್ರಯಾಣಿಸುವವರಿಗೆ ಕೊನೆಗೂ ಮಾಸ್ಕ್ಗಳಿಂದ ಮುಕ್ತಿ ದೊರಕಿದೆ. ಏಕಾಂಗಿಯಾಗಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯ ಮಾಸ್ಕ್ ನಿಯಮವನ್ನು ತೆಗೆದು ಹಾಕಿದೆ. ಆದರೆ ಒಬ್ಬರಿಗಿಂತ ಹೆಚ್ಚು ಮಂದಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಹಾಕಿಕೊಳ್ಳಲೇ ಬೇಕು ಎಂದು ದೆಹಲಿ ಸರ್ಕಾರ ಎಚ್ಚರಿಸಿದೆ

 

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್‌ಬುಕ್ ಬಳಕೆದಾರರ ಸಂಖ್ಯೆಯಲ್ಲಿ ಇಳಿಕೆ: ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ