Select Your Language

Notifications

webdunia
webdunia
webdunia
webdunia

ಆತಂಕ ಬೇಡ, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ : ಸುಧಾಕರ್

ಆತಂಕ ಬೇಡ, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ : ಸುಧಾಕರ್
ಬೆಂಗಳೂರು , ಗುರುವಾರ, 4 ಆಗಸ್ಟ್ 2022 (11:15 IST)
ಬೆಂಗಳೂರು : ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ.

ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಜುಲೈ 22 ರಂದು ಮಂಕಿಪಾಕ್ಸ್ ಅನ್ನು ‘ತುರ್ತು ಆರೋಗ್ಯ ಪರಿಸ್ಥಿತಿ’ ಎಂದು ಘೋಷಿಸಿದೆ.

ಸುಮಾರು 80 ದೇಶಗಳ 20,000 ಜನರಿಗೆ ಈ ಸೋಂಕು ಹರಡಿದೆ. ಭಾರತದಲ್ಲಿ 8 ಪ್ರಕರಣಗಳು ಕಂಡುಬಂದಿವೆ. ಕೇರಳದಲ್ಲಿ 5 ಮತ್ತು ದೆಹಲಿಯಲ್ಲಿ ಮೂವರು ಸೋಂಕಿತರಿದ್ದಾರೆ. ಕರ್ನಾಟಕದಲ್ಲಿ 3 ವ್ಯಕ್ತಿಗಳ ಮೇಲೆ ಸಂಶಯದ ಆಧಾರದಲ್ಲಿ ಪರೀಕ್ಷೆ ನಡೆಸಿದ್ದೇವೆ.
ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸೋಂಕಿತರಿಗಾಗಿ ಬೆಂಗಳೂರಿನ ಸಾಂಕ್ರಾಮಿಕ ರೋಗಗಳ (ಇಡಿ) ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಯಾವುದೇ ವ್ಯಕ್ತಿಗೆ ಸೋಂಕು ದೃಢಪಟ್ಟರೆ ಅವರನ್ನು 21 ದಿನಗಳ ಕಾಲ ಐಸೋಲೇಟ್ ಮಾಡಬೇಕು. 21 ದಿನ ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಚರ್ಮದ ಮೇಲೆ ಆಗಿರುವ ಗಾಯ ಗುಣ ಆಗುವವರೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ