Select Your Language

Notifications

webdunia
webdunia
webdunia
Thursday, 3 April 2025
webdunia

ಇನ್ಮುಂದೆ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ!

ಕೇಂದ್ರ ಸರ್ಕಾರ
ನವದೆಹಲಿ , ಸೋಮವಾರ, 6 ಜೂನ್ 2022 (12:26 IST)
ನವದೆಹಲಿ : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.

ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1006 ರೂಪಾಯಿ ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಏರಿಕೆ ಕಂಡ ಕೊರೊನಾ!