Publish Date: Sat, 27 Nov 2021 (13:12 IST)
Updated Date: Sat, 27 Nov 2021 (13:14 IST)
ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ ಸರ್ವೆ ನಡೆಸುತ್ತಿದ್ದಾರೆ. ಸದ್ಯ ಕೇರಳದ ವಯನಾಡಿನಲ್ಲಿ 13 ಪ್ರಕರಣ ಪತ್ತೆಯಾಗಿದ್ದು, ಕೇರಳದಿಂದ ಬಂದಿರುವವರ ಬಗ್ಗೆ ನಿಗಾ ಇಡಲು ಸೂಚನೆ ನೀಡಲಾಗಿದೆ.
ಕೇರಳದಿಂದ ಬಂದು ವಾಂತಿ ಭೇದಿ ಕಾಣಿಸಿಕೊಂಡರೆ ಅಂತವರು ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ನೊರೊ ವೈರಸ್ ಲಕ್ಷಣ ಹಾಗೂ ಎಚ್ಚರಿಕೆ ವಹಿಸುವುದರ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.