ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಹೆಚ್ಚಿದ ಧ್ವನಿ

Webdunia
ಶನಿವಾರ, 28 ಜುಲೈ 2018 (09:36 IST)
ಬೆಂಗಳೂರು: ಉತ್ತರ ಕರ್ನಾಟಕವನ್ನು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹುಟ್ಟಿದ ಧ್ವನಿ ದಿನೇ ದಿನೇ ಹೆಚ್ಚುತ್ತಿದೆ.
 

ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ಮುಂದಿನ ದಿನಗಳಲ್ಲಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿನ ಹೋರಾಟ ತೀವ್ರಗೊಳಿಸಲಾಗುವುದು ಎಂದು ಅಲ್ಲಿನ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಶಾಸಕ ಬಿ ಶ್ರೀರಾಮುಲು, ವಿವಿಧ ಮಠಾಧೀಶರು, ಪ್ರತ್ಯೇಕ ರಾಜ್ಯದ ಕೂಗಿಗೆ ನೇತೃತ್ವ ವಹಿಸಿದ್ದಾರೆ. ಅಗತ್ಯ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ರಾಮುಲು ಹೇಳಿದ್ದಾರೆ.

ಆದರೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಮುಖ‍ಂಡರು ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ ಎಂದಿದ್ದಾರೆ. ಆದರೆ ಸಿಎಂ ಕುಮಾರಸ್ವಾಮಿ ತಮ್ಮ ಆಯ್ಕೆಯ ನಾಲ್ಕೈದು ಜಿಲ್ಲೆಗಳನ್ನು ಬಿಟ್ಟು ಬೇರೆ ಜಿಲ್ಲೆಗಳತ್ತ ಗಮನಹರಿಸದೇ ಇರುವುದರಿಂದಲೇ ಇಂತಹ ಹೋರಾಟ ಶುರುವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಪೋರ್ಟ್ ನಲ್ಲಿ ಮಂಡಿಯೂರಿದ್ರೂ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು: ಬಿಜೆಪಿ ವ್ಯಂಗ್ಯ

ನಡು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ ಡಿಕೆ ಶಿವಕುಮಾರ್ ಪೋಸ್ಟ್

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಹುಲ್ ಗಾಂಧಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments