ನವದಹೆಲಿ : 500 ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
									
			
			 
 			
 
 			
					
			        							
								
																	ನೋಟು ಅಮಾನ್ಯೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಸೋಮವಾರ ವಜಾಗೊಳಿಸಿದೆ.
									
										
								
																	ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ.
									
											
							                     
							
							
			        							
								
																	ಕೇಂದ್ರದ ನೋಟ್ ಬ್ಯಾನ್ ನಿರ್ಧಾರಕ್ಕೆ ಪೀಠ 4:1 ಅನುಪಾತದಲ್ಲಿ ತೀರ್ಪು ಪ್ರಕಟಿಸಿದೆ. ನೋಟು ಅಮಾನ್ಯೀಕರಣ ಮಾಡಿರುವ ಕೇಂದ್ರದ ನಿರ್ಧಾರ ಸಮ್ಮತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.